ಬೆಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್ ಗಳ ಬಂಧನ, 3.30 ಕೋಟಿ ಮೌಲ್ಯದ ಮಾದಕ ವಸ್ತು ವಶ
ಬೆಂಗಳೂರು ಮಹಾನಗರ ಪೊಲೀಸರು ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ 3.30 ಕೋಟಿ ರೂ. ಮೌಲ್ಯದ 1 ಕೆಜಿ 280 ಗ್ರಾಂ, ಬ್ರೌನ್ ಶುಗರ್ ಸೇರಿದಂತೆ ನಿಷೇಧಿತ ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ಮಹಾನಗರ ಪೊಲೀಸರು ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ 3.30 ಕೋಟಿ ರೂ. ಮೌಲ್ಯದ 1 ಕೆಜಿ 280 ಗ್ರಾಂ, ಬ್ರೌನ್ ಶುಗರ್ ಸೇರಿದಂತೆ ನಿಷೇಧಿತ ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು 31 ವರ್ಷದ ರಾಜೂರಂ ಬಿಷ್ಣೋಯ್ ಮತ್ತು 21 ವರ್ಷದ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ರಾಜಸ್ಥಾನ ಮೂಲದವರಾದ ಆರೋಪಿಗಳಿಂದ ವಶಕ್ಕೆ ಪಡೆಯಲಾದ ನಿಷೇಧಿತ ಡ್ರಗ್ಸ್ ಪೈಕಿ 475 ಗ್ರಾಂ ಅಫಿಮು, 25 ಎಲ್ಎಸ್ಡಿ ಸ್ಟ್ರಿಪ್ಸ್, 35 ಗ್ರಾಂ ಎಂಡಿಎಂಎ ಫಾಯಿಲ್ ರೋಲ್ ಗಳು. 3 ಮೊಬೈಲ್ ಫೋನ್, 2 ಮೋಟಾರ್ ಸೈಕಲ್, 3 ತೂಕದ ಯಂತ್ರಗಳು ಸೇರಿವೆ.
ಸಿಟಿ ಮಾರ್ಕೆಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


