ಹಾವೇರಿ: ಎತ್ತಿನ ಬಂಡಿ ಸಮೇತ ನೀರುಪಾಲಾಗಿದ್ದ ಇಬ್ಬರು ಯುವಕರ ಶವ ಪತ್ತೆ
ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ.

ಹಾವೇರಿ: ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ.
ನದಿಯಲ್ಲಿ ಮರಳು ತರಲು ಹೋಗಿದ್ದ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಜಗದೀಶ್ ಐರಣಿ (25), ಬೆಟ್ಟಪ್ಪ ಮಿಳ್ಳಿ (25) ಎನ್ನುವವರ ಶವ ಇಂದು ಪತ್ತೆಯಾಗಿದೆ.
ಸತತ ಎರಡು ದಿನಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂಡನೆ ಕಾರ್ಯಾಚರಣೆ ನಡೆದ ನಂತರ 9 ಕಿ.ಮೀ ಅಂತರದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಸಧ್ಯ ಮೃತ ಯುವಕರ ಕುಟುಂಬ, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ರಾಣೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


