ಚರ್ಚ್ ಫಾದರ್ ನಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ
ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕಲಬುರಗಿ: ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಆಶಾ ಮೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥಡ್ರಾಲ್ ಚರ್ಚ್ ನ ಫಾದರ್ ಕ್ಲೀವನ್ ಅವರು ತನಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂದು ಆಶಾ ಮೇರಿ ಆರೋಪಿಸಿದ್ದಾರೆ. ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ತನ್ನ ಸ್ನೇಹಿತೆ ಮೇರಿ ಬದಲಾಗಿ ಆಶಾ, ಚರ್ಚ್ ನ ಫಾದರ್ ಗಳಿಗಾಗಿ ಅಡುಗೆ ಮಾಡುತ್ತಿದ್ದರು. ಆ ವೇಳೆ ಫಾದರ್ ಕ್ಲೀವನ್ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆ ಆಗಮಿಸಿದ ವೇಳೆ ಆಶಾ ಮೇರಿ, ತನಗೆ ನ್ಯಾಯ ದೊರಕುತ್ತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


