ರಾತ್ರಿ ವೇಳೆ ಬಾರ್, ಕ್ಲಬ್‌ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡುವ ಮಸೂದೆ ಮಂಡಿಸಿದ ಶಿವರಾಂ ಹೆಬ್ಬಾರ್
ರಾತ್ರಿ ವೇಳೆ ಬಾರ್ ಮತ್ತು ಕ್ಲಬ್‌ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡಲಾಗಿದ್ದು, ಎಲ್ಲಿ ಯಾವಾಗ ದುಡಿಯಬೇಕು ಎಂಬ ಆಯ್ಕೆ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೇರಿದ್ದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಬುಧವಾರ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾತ್ರಿ ವೇಳೆ ಬಾರ್ ಮತ್ತು ಕ್ಲಬ್‌ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡಲಾಗಿದ್ದು, ಎಲ್ಲಿ ಯಾವಾಗ ದುಡಿಯಬೇಕು ಎಂಬ ಆಯ್ಕೆ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೇರಿದ್ದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಬುಧವಾರ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ(ತಿದ್ದುಪಡಿ)ವಿಧೇಯಕ, 2020 ಮಂಡನೆ ಚರ್ಚೆಯ ವೇಳೆ
ಸಚಿವ ಶಿವರಾಮ್ ಹೆಬ್ಬಾರ್, ಇದು ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಜಾರಿಗೆ ತಂದಿರುವ ವಿಧೇಯಕ ಎಂದರು.
ಐಟಿ-ಬಿಟಿ ಮಾಲ್‌ಗಳಲ್ಲಿ ರಾತ್ರಿ ವೇಳೆ ಮಹಿಳೆಯರು ದುಡಿಯುತ್ತಿದ್ದು, ಇನ್ನು ಮುಂದೆ ಅಂಗಡಿಗಳಲ್ಲಿಯೂ ದುಡಿಯಬಹುದು. ರಾತ್ರಿ ವೇಳೆ ದುಡಿಯುವ ಮಹಿಳೆ ವಾಹನ ಹತ್ತಿದಾಗ ಆಕೆಯನ್ನು ಮೊದಲ ಪ್ರಯಾಣಿಕಳಾಗಿ ಹತ್ತಿಸಬಾರದು ಮತ್ತು ಕೊನೆಯದಾಗಿ ಇಳಿಸಬಾರದು ಎಂದರು.
ಇದಕ್ಕು ಮುನ್ನ ವಿಧಾನಸಭೆಯಿಂದ ಅಂಗೀಕಾರ ಪಡೆದಿರುವ 2020ನೇ ಸಾಲಿನ "ಕರ್ನಾಟಕ ರೇಸ್ ಕೋರ್ಸ್‌ಗಳಿಗೆ ಪರವಾನಿಗೆ ನೀಡುವ(ತಿದ್ದುಪಡಿ)ವಿಧೇಯಕವನ್ನು ಮಂಡಿಸಲಾಯಿತು. ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಮಾಧುಸ್ವಾಮಿ ಅವರು ವಿಧೇಯಕವನ್ನು ಮಂಡಿಸಿದರು. ಬಳಿಕ ಮಸೂದೆ ಕುರಿತು ವಿಸ್ತೃತ ಚರ್ಚೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


