ರಾಜ್ಯ

ಡ್ರಗ್ಸ್ ಪ್ರಕರಣ: ಮತ್ತೆ ಕಾರ್ತಿಕ್ ರಾಜು ಸಿಸಿಬಿ ವಶಕ್ಕೆ

ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಡ್ರಗ್ಸ್ ಪ್ರಕರಣ: ಮತ್ತೆ ಕಾರ್ತಿಕ್ ರಾಜು ಸಿಸಿಬಿ ವಶಕ್ಕೆ
ಸಿಸಿಬಿ ಕಚೇರಿ
Published On :

ಬೆಂಗಳೂರು: ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಾದಕ ಜಾಲದ ನಂಟು ಆರೋಪದಡಿ ಈಗಾಗಲೇ ವಿಚಾರಣೆ ಎದುರಿಸಿದ್ದ ಆರೋಪಿ ಕಾರ್ತಿಕ್​​​​​​​​​​​​ ರಾಜುನನ್ನು ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಕಾರ್ತಿಕ್ ವಿಚಾರಣೆ ನಡೆಸಲಾಗುತ್ತಿದೆ.

ಕಾರ್ತಿಕ್, ಪ್ರತಿಷ್ಠಿತ ರೆಸಾರ್ಟ್ ವೊಂದರ ಮಾಲೀಕರಾಗಿದ್ದಾರೆ. ಇವರ ರೆಸಾರ್ಟ್​​​​ನಲ್ಲಿ ಡ್ರಗ್ಸ್ ಪಾರ್ಟಿಗಳು ನಡೆಯುತ್ತಿದ್ದವು ಎನ್ನಲಾಗಿದೆ. ಬಂಧಿತ ಆರೋಪಿ ಕಾರ್ತಿಕ್ ಅವರ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಕಾರ್ತಿಕ್ ರನ್ನು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿದ್ದಾರೆ. ವಿಚಾರಣೆ ವೇಳೆ ಕಾರ್ತಿಕ್ ರಾಜು ಅವರು ಯಾವೆಲ್ಲ ಅಂಶಗಳನ್ನು ಬಾಯ್ಬಿಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.