ಮೇಲ್ಮನೆಯಲ್ಲಿ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕ 2020 ಅಂಗೀಕಾರ
ನ್ಯಾಯಾಲಯದ ನಿರ್ದೇಶನದಂತೆ ಭಿಕ್ಷುಕರು ಮಾನಸಿಕ ಅಸ್ವಸ್ಥರಾದರೆ, ಕುಷ್ಠರೋಗ ಹಾಗೂ ಮಾರಣಾಂತಿಕ ಕಾಯಿಲೆಯಿಂದ ನರಳುತ್ತಿದ್ದರೆ, ಬಂಧನದಲ್ಲಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಉದ್ದೇಶವನ್ನೊಳಗೊಂಡ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕ 2020ಕ್ಕೆ ವಿಧಾನಪರಿಷತ್ತಿನಲ್ಲಿಂದು ಅಂಗೀಕಾರ ನೀಡಲಾಗಿದೆ.

ಬೆಂಗಳೂರು: ನ್ಯಾಯಾಲಯದ ನಿರ್ದೇಶನದಂತೆ ಭಿಕ್ಷುಕರು ಮಾನಸಿಕ ಅಸ್ವಸ್ಥರಾದರೆ, ಕುಷ್ಠರೋಗ ಹಾಗೂ ಮಾರಣಾಂತಿಕ ಕಾಯಿಲೆಯಿಂದ ನರಳುತ್ತಿದ್ದರೆ, ಬಂಧನದಲ್ಲಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಉದ್ದೇಶವನ್ನೊಳಗೊಂಡ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕ 2020ಕ್ಕೆ ವಿಧಾನಪರಿಷತ್ತಿನಲ್ಲಿಂದು ಅಂಗೀಕಾರ ನೀಡಲಾಗಿದೆ.
ತಿದ್ದುಪಡಿ ಮಸೂದೆ ಕುರಿತು ಮಾಹಿತಿ ನೀಡಿದ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಚಿಕಿತ್ಸೆಯ ನಂತರ ನ್ಯಾಯಾಲಯ ಭಿಕ್ಷುಕರನ್ನು ಎಲ್ಲಿಗೆ ಸೇರಿಸಬೇಕು ಎಂದು ನಿರ್ದೇಶನ ನೀಡುತ್ತದೆಯೊ ಅಲ್ಲಿಗೆ ದಾಖಲಿಸುವ ಅಂಶಗಳನ್ನು ಈ ಮಸೂದೆ ಒಳಗೊಂಡಿದೆ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಪರವಾಗಿ ವಿಧೇಯಕ ಮಂಡಿಸಿ ಮಾತನಾಡಿದ ಅವರು, ವಿಧೇಯಕದಿಂದ ಭೀಕ್ಷಾಟನೆ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಲಿದ್ದು, ಭಿಕ್ಷುಕರನ್ನು ಸಹ ಸೂಕ್ತ ರೀತಿಯಲ್ಲಿ ಅಂದರೆ ಮಾನವೀಯತೆಯಿಂದ ನಡೆಸಿಕೊಳ್ಳಲು ಅವಕಾಶವಾಗಲಿದೆ ಎಂದರು. ಬಳಿಕ ಸದನ ಪ್ರಸ್ತಾವನೆ ಅಂಗೀಕರಿಸಿ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


