ರಾಜ್ಯ

ಹಿರಿಯ ಮುಸ್ಲೀಂ ವಿದ್ವಾಂಸ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನ

ಹಿರಿಯ ಮುಸ್ಲೀಂ ವಿದ್ವಾಂಸ ಮತ್ತು ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕ್ವಾಜಿ ಆಗಿದ್ದ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಗುರುವಾರ ನಗರದಲ್ಲಿ ನಿಧನ ಹೊಂದಿದ್ದಾರೆ.

ಹಿರಿಯ ಮುಸ್ಲೀಂ ವಿದ್ವಾಂಸ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನ
ಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್
Published On :

ಮಂಗಳೂರು: ಹಿರಿಯ ಮುಸ್ಲೀಂ ವಿದ್ವಾಂಸ ಮತ್ತು ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕ್ವಾಜಿ ಆಗಿದ್ದ ಅಲ್ಹಾಜ್ ಪಿಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಗುರುವಾರ ನಗರದಲ್ಲಿ ನಿಧನ ಹೊಂದಿದ್ದಾರೆ.

ಅವರಿಗೆ 71 ವರ್ಷ ವಯಸ್ಸಾಗಿತ್ತು. ಬೇಕಲ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸುನ್ನಿ ಜಂಇಯ್ಯತುಲ್ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅವರು ಜಾಮಿಯ ಸಅದಿಯ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.