ರಾಜ್ಯ

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ

ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆ ನೀಡದ ನಗರದ 4 ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಎಫ್ಐಆರ್ ದಾಖಲಿಸುವುದಕ್ಕೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ.

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆ ನೀಡದ ನಗರದ 4 ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಎಫ್ಐಆರ್ ದಾಖಲಿಸುವುದಕ್ಕೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ.
 
ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ, ಪದ್ಮನಾಭನಗರದ ಎನ್'ಯು ಆಸ್ಪತ್ರೆ, ಲಾಗ್'ಫಾರ್ಡ್ ಗಾರ್ಡನ್'ನ ಪಬ್ಲಿಕ್ ಆಸ್ಪತ್ರೆ ಹಾಗೂ ಮಿಲ್ಲರ್ಸ್ ರಸ್ತೆಯ ವಿಕ್ರಮ್ ಆಸ್ಪತ್ರೆ ವಿರುದ್ಧ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಆದೇಶಸಿದ್ದು, ಆಸ್ಪತ್ರೆಗಳು ಇರುವ ವ್ಯಾಪ್ತಿಯ ಪಾಲಿಕೆ ಆರೋಗ್ಯ ಅಧಿಕಾರಿಗಳು ಅಥವಾ ಜಂಟಿ ಆಯುಕ್ತರು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಹೋಗಿ ದೂರು ದಾಖಲಿಸುವುದಕ್ಕೆ ಸೂಚಿಸಲಾಗಿದೆ. 

ನಗರದಲ್ಲಿ ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡದ 36 ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ಪಾಲಿಕೆ ಇತ್ತೀಚೆಗಷ್ಟೇ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್'ಗೆ 48 ಗಂಟೆಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿತ್ತು. ಈ ವೇಳೆ ನಾಲ್ಕು ಪ್ರಮುಖ ಆಸ್ಪತ್ರೆಗಳು ನೀಡಿರುವ ವಿವರಣೆ ಸಮಂಜಸವಾಗಿಲ್ಲ. ಹೀಗಾಗಿ ಬಿಬಿಎಂಪಿ ಆಯುಕ್ತರು ವಿಪತ್ತು ನಿರ್ವಹಣೆ ಕಾಯ್ದೆಯಡಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.