ಕೃಷಿ ಸಂಬಂಧಿತ ಮಸೂದೆಗೆ ವಿರೋಧ: ಮೈಸೂರು ಬ್ಯಾಂಕ್ ಸರ್ಕಲ್ ಸೇರಿ ಬೆಂಗಳೂರಿನ ವಿವಿಧೆಡೆ ಪ್ರತಿಭಟನೆ
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ 35ಕ್ಕೂ ಅಧಿಕ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಹೊರವಲಯ ಮತ್ತು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ರೈತರು ರಸ್ತೆ ತಡೆ ನಡೆಸುತ್ತಿದ್ದಾರೆ.

ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ 35ಕ್ಕೂ ಅಧಿಕ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಹೊರವಲಯ ಮತ್ತು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ರೈತರು ರಸ್ತೆ ತಡೆ ನಡೆಸುತ್ತಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆಗೆ ವಿವಿಧ ಸಂಘಟನೆಗಳೂ ಕೂಡ ಸಾಥ್ ನೀಡಿದ್ದು, ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ ನಡೆಸುತ್ತಿದ್ದ ದೃಶ್ಯ ಮೈಸೂರು ಬ್ಯಾಂಕ್ ನಲ್ಲಿ ಕಂಡುಬಂದಿತು. ಸರ್ಕಾರ ನಮ್ಮ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ಆರೋಪಿಸಿ ವಿನೂತನ ಪ್ರತಿಭಟನೆ ನಡೆಸಲಾಗುತ್ತಿದೆ.
ಮೈಸೂರು ಬ್ಯಾಂಕ್ , ಮೌರ್ಯ ವೃತ್ತದಲ್ಲಿ ನೂರಾರು ರೈತರು ಸೇರಿರುವುದರಿಂದ ಸುತ್ತಮುತ್ತಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


