ಕಲಬುರಗಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.236 ಕೆಜಿ ಗಾಂಜಾ ವಶ, ಇಬ್ಬರ ಬಂಧನ
ಕಲಬುರಗಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 1.236 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಕಲಬುರಗಿ: ಕಲಬುರಗಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 1.236 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಜೇವಾರ್ಗಿಯಲ್ಲಿ ಗಾಂಜಾ ಮಾರಾಟ ಪ್ರದೇಶದ ಮೇಲೆ ದಾಳಿ ನಡೆಸಿರುವ ಪೊಲೀಸರು ರೂ.2.94 ಲಕ್ಷ ಮೌಲ್ಯದ 1.236 ಕೆಜಿ ಗಾಂಜಾ, ನಿಯತಕಾಲಿಕೆಗಳು ಹಾಗೂ ದೇಶೀ ನಿರ್ಮಿತ ಪಿಸ್ತೂಲೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ತೂಕ ಹಾಕುವ ಯಂತ್ರ ಹಾಗೂ ಡೆಬಿಟ್ ಕಾರ್ಡ್'ಗಳನ್ನೂ ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ.
ದಾಳಿ ವೇಳೆ ಇಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಲಾಲ್ ಅಹ್ಮದ್ ಹಾಗೂ ಚಂದ್ರಶೇಖರ್ ಎಂದು ಗುರ್ತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


