ಕೋವಿಡ್: ರಾಜ್ಯದಲ್ಲಿಂದು 8,811 ಹೊಸ ಪ್ರಕರಣ, 5,417 ಮಂದಿ ಡಿಸ್ಚಾರ್ಜ್
ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 5,66,023 ಕೋವಿಡ್ ಸೋಂಕು ಪತ್ತೆಯಾಗಿದೆ. ಅದರ ಪೈಕಿ 4,55,719 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟಾರೆ 86 ಮಂದಿ ಕೋವಿಡ್ ಗೆ ಬಲಿಯಾಗಿದ್ದರೆ ಇದುವರೆಗೆ ರಾಜ್ಯದಲ್ಲಿ 8,503 ಮಂದಿ ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಸತತ ಮೂರನೇ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು ಇಂದು 4,083 ಹೊಸ ಕೇಸ್ ಗಳು ದಾಖಲಾಗಿದೆ. 27 ಮಂದಿ ಇಂದು ಮಹಾಮಾರಿಯಿಂದ ಸಾವಿಗೀಡಾಗಿದ್ದಾರೆ. ನಗರದಲ್ಲಿ ಇದುವರೆಗೆ 2,16,630 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು 2,821 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು 2,821 ಮಂದಿ ಗುಣಮುಖವಾಗಿ ಮನೆಗೆ ಮರಳಿದ್ದರೆ ಇದುವರೆಗೆ ಗುಣಮುಖರಾದವರ ಸಂಖ್ಯೆ 1,70,430 ಗೆ ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


