ಶಿವಮೊಗ್ಗ: ಕೊವಿಡ್-19ಗೆ ಎಎಸ್ಐ ಬಲಿ
ಮಾರಕ ಕೊರೊನಾ ಸೋಂಕಿಗೆ ರಾಜ್ಯದ ಮತ್ತೋರ್ವ ಪೊಲೀಸ್ ಆಧಿಕಾರಿ ಬಲಿಯಾಗಿದ್ದಾರೆ.

ಶಿವಮೊಗ್ಗ: ಮಾರಕ ಕೊರೊನಾ ಸೋಂಕಿಗೆ ರಾಜ್ಯದ ಮತ್ತೋರ್ವ ಪೊಲೀಸ್ ಆಧಿಕಾರಿ ಬಲಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಮಂಜುನಾಥ್ (58) ಅವರು ಕೊರೋನ ಸೋಂಕಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಮೃತ ಮಂಜುನಾಥ್ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯ ಅಪರಾಧ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದ ಇವರು, ಕೊರೋನ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇಲಾಖೆಗೆ ಉತ್ತಮ ಸೇವೆ ನೀಡಿದ್ದ ಮಂಜುನಾಥ್ ಅಗಲಿಕೆಗೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


