ಶಾಸಕ ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು: ಅಧಿವೇಶನದಲ್ಲಿ ಭಾಗವಹಿಸಿದವರಲ್ಲಿ ಆತಂಕ
ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನದಲ್ಲಿ ಹಾಜರಾಗಿದ್ದವರಲ್ಲಿ ಆತಂಕ ಮೂಡಿದೆ.

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನದಲ್ಲಿ ಹಾಜರಾಗಿದ್ದವರಲ್ಲಿ ಆತಂಕ ಮೂಡಿದೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ನನಗೆ ಕೋವಿಡ್ ರೋಗಲಕ್ಷಣ ಇರಲಿಲ್ಲ. ಆದರೆ ಕೋವಿಡ್ ಟೆಸ್ಟ್ನ ವರದಿ ಪಾಸಿಟಿವ್ ಬಂದಿದೆ.
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
ದಿನೇಶ್ ಗುಂಡೂರಾವ್ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು, ಹಾಗಾಗಿ ಸಹಜವಾಗಿಯೇ ಇವರ ಸಂಪರ್ಕಕ್ಕೆ ಬಂದವರಲ್ಲಿ ಕರೊನಾ ಭೀತಿ ಆವರಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


