ಕರ್ನಾಟಕ ವಿಧಾನಸಭೆ: ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆ ಅಂಗೀಕಾರ
ತೀವ್ರ ವಿರೋಧ ಮತ್ತು ರೈತ ಸಂಘಗಳ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಸಭೆ ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಿದೆ.

ಬೆಂಗಳೂರು: ತೀವ್ರ ವಿರೋಧ ಮತ್ತು ರೈತ ಸಂಘಗಳ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಸಭೆ ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಿದೆ.
ರೈತ ಸಂಘಟನೆಗಳು ಮತ್ತು ವಿಪಕ್ಷಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರವು ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿದೆ. ಈ ಎರಡೂ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಾಜ್ಯ ಬಂದ್‌ಗೆ ಕರೆ ನೀಡಿವೆ. ಇದು ರೈತರ ಮರಣ ಶಾಸನ ಎಂದು ಆರೋಪಿಸಿದ ಕಾಂಗ್ರೆಸ್ ಸದಸ್ಯರು ಮಸೂದೆಯ ಪ್ರತಿಯನ್ನು ಹರಿದು ಹಾಕಿದರಲ್ಲದೆ, ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದರ ಹಿಂದೆಯೇ ಜೆಡಿಎಸ್ ಸದಸ್ಯರೂ ಸಭಾತ್ಯಾಗ ಮಾಡಿದರು.
ಮಸೂದೆ ಮಂಡಿಸಿದ ಕಂದಾಯ ಸಚಿವ ಆರ್. ಅಶೋಕ್, ರೈತರಿಗೆ ಇದರಿಂದ ಯಾವುದೇ ಕಾರಣಕ್ಕೂ ತೊಂದರೆಯಾಗದು ಎಂದರು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರೈತರ ಸಹಿತ ಬಹುತೇಕರ ವಿರೋಧವಿದೆ. ಯಾವ ಉದ್ದೇಶಕ್ಕಾಗಿ ಭೂ ಸುಧಾರಣೆಗಳ ಕಾಯ್ದೆಯನ್ನು ದೇವರಾಜ ಅರಸು ಅವರು ತಂದಿದ್ದರೋ ಆ ಮೂಲ ಆಶಯಕ್ಕೆ ಇದು ವಿರುದ್ಧವಾಗಿದೆ. ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎಂದು ಆರೋಪಿಸಿದರು.
ಜೆಡಿಎಸ್ ಸಹಮತ
ಅಚ್ಚರಿ ಬೆಳವಣಿಗೆಯಲ್ಲಿ ಈ ಮಸೂದೆಗೆ ಜೆಡಿಎಸ್ ಸಹಮತ ವ್ಯಕ್ತಪಡಿಸಿತು. ಆದರೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಈ ಮಸೂದೆಯನ್ನು ಕೊರೊನಾ ಸಂದರ್ಭದಲ್ಲಿ ಅಧ್ಯಾದೇಶ ಮೂಲಕ ತಂದ ಅಗತ್ಯದ ಬಗ್ಗೆ ಪ್ರಶ್ನಿಸಿದರು. ಜಮೀನು ಖರೀದಿ ಮಿತಿ ಹೆಚ್ಚು ಮಾಡಿರುವುದರಿಂದ ಮತ್ತೆ ಜಮೀನ್ದಾರಿ ಪದ್ಧತಿಯತ್ತ ಹೋಗುವಂತಾಗುತ್ತದೆ ಎಂದು ಹೇಳಿದರಾದರೂ ಇದರಿಂದ ರೈತರಿಗೆ ಎಷ್ಟು ಅನುಕೂಲ ಎಂಬ ಬಗ್ಗೆ ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


