ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ನ್ಯಾಯಾಲಯದಲ್ಲಿ ದೂರು ದಾಖಲು
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ತುಮಕೂರು: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಹೈಕೋರ್ಟ್ ವಕೀಲ ಹಾಗೂ ತುಮಕೂರು ನಿವಾಸಿ ಎಲ್.ರಮೇಶ್ ನಾಯಕ್ ಶುಕ್ರವಾರ ದೂರು ದಾಖಲಿಸಿದ್ದಾರೆ. ‘ಸೆ.22ರಂದು ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದೆ. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ರಮೇಶ್ ದೂರಿನಲ್ಲಿ ಆರೋಪಿಸಿದ್ದಾರೆ.
ಕೃಷಿ ಮಸೂದೆ ಕುರಿತು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದ್ದು, ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನಿಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಹೀಗಾಗಿ ಅವರ ಟ್ವೀಟ್ ಕುರಿತು ಇದೀಗ ವಿವಾದ ಹುಟ್ಟಿಕೊಂಡಿದೆ, ಸಾಕಷ್ಟು ಚರ್ಚೆಯಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


