ಶಾಲೆಗಳ ಆರಂಭಕ್ಕೆ ಕುರಿತು ಸಲಹೆ ಕೇಳಿದ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.
ಶಾಲೆಗಳನ್ನು ಯಾವಾಗ ಆರಂಭಿಬೇಕು. ಯಾವ ಶಾಲೆಗಳನ್ನು ಮೊದಲು ಪ್ರಾರಂಭಿಸಬಹುದು.ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿ ಸಹಕಾರ ನಿರೀಕ್ಷಿಸಬಹುದು.ಈ ಕುರಿತು ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.
ಸೋಂಕಿನಿಂದಾಗಿ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


