ರೈತರು ಕರೆ ನೀಡಿರುವ ಬಂದ್ ರಾಜಕೀಯ ಪ್ರೇರಿತ: ಸಚಿವ ಸೋಮಶೇಖರ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಭಟನೆ
ರೈತ ಮುಖಂಡರು ಕರೆ ನೀಡಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂಬ ಸಚಿವ ಸೋಮಶೇಖರ್ ಅವರ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು: ರೈತ ಮುಖಂಡರು ಕರೆ ನೀಡಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂಬ ಸಚಿವ ಸೋಮಶೇಖರ್ ಅವರ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಂದ್'ಗೆ ರೈತರು ಕರೆ ಕೊಟ್ಟಿಲ್ಲ. ಕೆಲವು ಸಂಘಟನೆಗಳು ಬಂದ್'ಗೆ ಕರೆ ಕೊಟ್ಟಿವೆ. ಇದಕ್ಕೆ ರೈತರ ಬೆಂಬಲ ಇಲ್ಲ. ಆದರೆ, ರೈತರ ಹೆಸರಿನಲ್ಲಿ ಕೆಲ ಸಂಘಟನೆಗಳು ರಾಜಕೀಯ ಮಾಡುತ್ತಿವೆ ಎಂದು ಸಚಿವ ಎಸ್'ಟಿ ಸೋಮಶೇಖರ್ ಅವರು ಹೇಳಿಕೆ ನೀಡಿತ್ತು.
ಸಿದ್ಧಾರ್ಥನಗರದಲ್ಲಿರುವ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ದಸರಾ ಕುರಿತು ಪೂರ್ವ ಸಿದ್ಧತಾ ಸಭೆ ನಿಗದಿಯಾಗಿತ್ತು. ಈ ವಿಚಾರ ತಿಳಿದ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿಯವರು ಅಲ್ಲಿಗೆ ಧಾವಿಸಿ ದಿಢೀರ್ ಪ್ರತಿಭಟನೆ ನಡೆಸಿ ಘೇರಾವ್ ಹಾಕಲು ಯತ್ನಿಸಿದರು.
ಈ ವೇಳೆ ರೈತ ಮುಖಂಡರು, ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


