ಹಿರಿಯ ಸಾಹಿತಿ ಜಿ.ಎಸ್. ಅಮೂರ ನಿಧನ: ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ.

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನಲ್ಲಿ ಇಂದು ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಖ್ಯಾತ ಸಾಹಿತಿ, ವಿಮರ್ಶಕ ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ ಪರಿಕಲ್ಪನೆ’ ಎಂಬ ಮಹಾಪ್ರಬಂಧ ಬರೆದು ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದರು. ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ ಎಂದು ದುಃಖಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ’. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


