ಪಾರ್ಟಿಯಲ್ಲಿ ಒಮ್ಮೆ ನಟಿ ಅನುಶ್ರೀಯನ್ನು ನೋಡಿದ್ದೆ: ಆಸ್ಕಾ
ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಅವರನ್ನು ತಾನು ಈ ಹಿಂದೆ ಪಾರ್ಟಿಯೊಂದರಲ್ಲಿ ನೋಡಿದ್ದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ಆಸ್ಕಾ ಸಿಸಿಬಿ ಅಧಿಕಾರಿಗಳ ಬಾಯಿ ಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.

ಮಂಗಳೂರು: ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಅವರನ್ನು ತಾನು ಈ ಹಿಂದೆ ಪಾರ್ಟಿಯೊಂದರಲ್ಲಿ ನೋಡಿದ್ದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ಆಸ್ಕಾ ಸಿಸಿಬಿ ಅಧಿಕಾರಿಗಳ ಬಾಯಿ ಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಸಿಸಿಬಿ ವಿಚಾರಣೆ ಎದುರಿಸಿದ್ದ ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀಗೆ ಬಂಧಿತ ಆಸ್ಕಾ ಮುಳುವಾಗುವ ಸಾಧ್ಯತೆ ಇದೆ.
ಈ ಬಗ್ಗೆ ಯುಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಪ್ರಸ್ತುತ ಸಿಸಿಬಿ ಅಧಿಕಾರಿಗಳ ವಶದಲ್ಲಿರುವ ಮಣಿಪುರದ ಮೂಲದ ಆಸ್ಕಾ, ವಿಚಾರಣೆ ವೇಳೆ ತಾನು ಅನುಶ್ರೀಯನ್ನು ಪಾರ್ಟಿಯಲ್ಲಿ ನೋಡಿದ್ದಾಗಿ ಹೇಳಿದ್ದಾಳೆ ಎನ್ನಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರ ವಶದಲ್ಲಿರುವ ಮಣಿಪುರದ ಮೂಲದ ಆಸ್ಕಾ, ತಾನೊಮ್ಮೆ ಅನುಶ್ರೀಯನ್ನು ಪಾರ್ಟಿಯಲ್ಲಿ ನೋಡಿದ್ದಾಗಿ ವಿಚಾರಣೆ ವೇಳೆ ತನಿಖಾಧಿಕಾರಿಗಳ ಎದುರು ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.
ಆಸ್ಕಾ ಮಾಹಿತಿ ಹಿಡಿದು ಮುಂಬೈ ಆಪರೇಷನ್ಗೆ ಹೊರಟ ಮಂಗಳೂರು ಸಿಸಿಬಿ
ಮೂಲಗಳ ಪ್ರಕಾರ ಪ್ರಸ್ತುತ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಅಸ್ಕಾ ಸ್ಫೋಟಕ ಮಾಹಿತಿ ಬಾಯಿ ಬಿಟ್ಟಿದ್ದು, ತನಗೆ ಬಾಲಿವುಡ್ನ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟನ ಜೊತೆ ನಂಟದೆ ಎಂದು ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಇದೇ ಮಾಹಿತಿಯನ್ನಾಧರಿಸಿ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಮುಂಬೈಗೆ ಹೊರಟಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


