ರಾಜ್ಯದಲ್ಲಿ ಕೊರೋನಾ ರೌದ್ರಾವತಾರ! ಒಂದೇ ದಿನ 10,453 ಹೊಸ ಪ್ರಕರಣ, ಬೆಂಗಳೂರಿನಲ್ಲಿ 4,868 ಮಂದಿಗೆ ಸೋಂಕು
ರಾಜ್ಯದಲ್ಲಿಂದು ಕೊರೋನಾ ಹೊಸ ದಾಖಲೆ ಬರೆದಿದ್ದು ಒಂದೇ ದಿನ 10,453 ಹೊಸ ಪ್ರಕರಣಗಳು ದಾಖಲಾಗಿದೆ.

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಹೊಸ ದಾಖಲೆ ಬರೆದಿದ್ದು ಒಂದೇ ದಿನ 10,453 ಹೊಸ ಪ್ರಕರಣಗಳು ದಾಖಲಾಗಿದೆ.
ಇಂದು ರಾಜ್ಯದಲ್ಲಿ ಒಟ್ಟಾರೆ 136 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ.
ಇಂದಿನವರೆಗೆ ರಾಜ್ಯದಲ್ಲಿ ಒಟ್ಟೂ 5,92,911 ಪ್ರಕರಣಗಳು ವರದಿಯಾಗಿದ್ದು 8,777 ಮಂದಿ ಸಾವಿಗೀಡಾಗಿದ್ದಾರೆ.
ಇಂದು 6,628 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ಮರಳಿದ್ದರೆ ಇದುವರೆಗೆ 4,76,378 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ 4,868 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣದ ಸಂಖ್ಯೆ 2,28,437ಕ್ಕೆ ತಲುಪಿದೆ. ನಗರದಲ್ಲಿಂದು ಒಟ್ಟು 67 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


