ಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟ ರಹಮಾನ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ರಹಮಾನ್ ಅವರು ಪವರ್ ಟಿವಿ ಮೇಲೆ ಸಿಸಿಬಿ ಪೊಲೀಸರು ರೇಡ್ ಮಾಡಿದ್ದಾರೆ. ಅವರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಚಾನಲ್ ಬಂದ್ ಮಾಡಿದ್ದು ನಮ್ಮ ಫೇಸ್ ಬುಕ್ ಲೈವನ್ನು ಬಂದ್ ಮಾಡಿದ್ದಾರೆ. ಇದರಿಂದ 250ಕ್ಕೂ ಉದ್ಯೋಗಿಗಳ ಕುಟುಂಬ ಬೀದಿಗೆ ಬಂದಿವೆ ಎಂದು ಹೇಳಿದ್ದಾರೆ.
ಪವರ್ ಟಿವಿ ಮೂಲಕ ಸತ್ಯಕ್ಕಾಗಿ ನಾವು ಧ್ವನಿಯೆತ್ತಿದ್ದೇವೆ. ವಿಜಯೇಂದ್ರ ವಿರುದ್ಧ ಧ್ವನಿಯೆತ್ತುವುದನ್ನು ನಿಲ್ಲಿಸುವುದಿಲ್ಲ. ಇವತ್ತು ನಮ್ಮ ಕುಟುಂಬಗಳನ್ನು ಬೀದಿಗೆ ತಂದಿದ್ದೀರಿ. ನಿಮಗೇನು ಮಾಡಿದ್ದೇವೆ ಎಂದು ರೆಹಮಾನ್ ಕಣ್ಣೀರಿಟ್ಟಿದ್ದಾರೆ.
ಇನ್ನು ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.
ಇದೇ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವಾನಂದ ತಗಡೂರು ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


