ಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿ
ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ಬೆಂಗಳೂರು: ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.
ಕಿಯೋಸ್ಕ್ (ಯಂತ್ರಗಳ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆ) ಗಳನ್ನು ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ (ಐಆರ್ ಎಸ್ ಡಿಸಿ) ಒಂದು ಮತ್ತು 8 ನೇ ಪ್ಲಾಟ್ ಫಾರ್ಮ್ ಗಳಲ್ಲಿ ಅಳವಡಿಸಿದ್ದು, ಗ್ರಾಹಕರು ನೇರವಾಗಿ ಪ್ಲಾಟ್ ಫಾರ್ಮ್ ಟಿಕೆಟ್ ನ್ನು ಮಾನವ ಸಂಪರ್ಕವಿಲ್ಲದೇ ಕ್ಯುಆರ್ ಕೋಡ್ ಮೂಲಕ ಪಡೆದುಕೊಳ್ಳಬಹುದಾಗಿದೆ.
ರೈಲ್ವೆ ಇಲಾಖೆಯ ಆಧುನೀಕರಣದ ಭಾಗವಾಗಿ ಈ ಯಂತ್ರವನ್ನು ಅಳವಡಿಕೆ ಮಾಡಲಾಗಿದ್ದು ಕೋವಿಡ್-19 ಪರಿಸ್ಥಿತಿಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕೂ ಈ ವಿಧಾನ ಸಹಕಾರಿಯಾಗಲಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಐಆರ್ ಎಸ್ ಡಿಸಿ ಅಧಿಕಾರಿ ಭಾನುವಾರದಿಂದ ಟಿಕೆಟ್ ಬುಕಿಂಗ್ ಜವಾಬ್ದಾರಿಯನ್ನು ನಮಗೆ ವಹಿಸಲಾಗಿದೆ.
ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ಯಂತ್ರಗಳನ್ನು ಎರಡು ಪ್ರವೇಶ ದ್ವಾರಗಳಲ್ಲಿ ಸ್ಥಾಪಿಸಲಾಗಿದೆ, ಜನರು ತಮ್ಮ ವಾಹನಗಳನ್ನು ನಿಲ್ಲಿಸಿ ತಕ್ಷಣವೇ ಟಿಕೆಟ್ ಪಡೆಯುವುದಕ್ಕೆ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
ಎರಡೂ ಕೌಂಟರ್ ಗಳಿಂದ ಭಾನುವಾರ 532 ಟಿಕೆಟ್ ಗಳನ್ನು ಮಾರಾಟ ಮಾಡಲಾಗಿದೆ. ಕೋವಿಡ್-19 ಕಾರಣದಿಂದಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಕಂಟೋನ್ಮೆಂಟ್, ಸಿಟಿ, ಯಶವಂತಪುರ ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಟಿಕೆಟ್ ನ್ನು 50 ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


