'ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ, ತಕ್ಷಣವೇ ಅವರನ್ನು ಕಿತ್ತು ಹಾಕಿ': ಸಿದ್ದರಾಮಯ್ಯ
ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.

ಬೆಂಗಳೂರು: ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ ಅವರು ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


