ಕೆಜಿಎಫ್ ನಲ್ಲಿ ಗಾಂಜಾ ಘಾಟು!
ಸ್ಯಾಂಡಲ್ವುಡ್ ನ ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಠಿಸಿತ್ತು. ಇದೀಗ ಕೆಜಿಎಫ್ ನಲ್ಲಿ ನೂರಾರು ಕೆಜಿ ಗಟ್ಟಲೆ ಗಾಂಜಾ ಸಿಕ್ಕಿದೆ.

ಸ್ಯಾಂಡಲ್ವುಡ್ ನ ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಠಿಸಿತ್ತು. ಇದೀಗ ಕೆಜಿಎಫ್ ನಲ್ಲಿ ನೂರಾರು ಕೆಜಿ ಗಟ್ಟಲೆ ಗಾಂಜಾ ಸಿಕ್ಕಿದೆ.
ಮನೆಯ ಹಿಂದೆ ನೂತನವಾಗಿ ನಿರ್ಮಿಸಲಾಗಿದ್ದ ಹೊಂಡದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 1.25 ಕೋಟಿ ಮೌಲ್ಯದ 229 ಕೆಜಿ ಗಾಂಜಾವನ್ನು ಕೆಜಿಎಫ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ತಿಂಗಳ ಮೊದಲ ವಾರದಲ್ಲಿ 1 ಕೋಟಿ ಮೌಲ್ಯದ 186 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಇದೀಗ ಹೊಂಡದಲ್ಲಿದ್ದ ಇನ್ನಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮಾರಿಕುಪ್ಪಂ ಪೊಲೀಸ್ ಠಾಣೆಯ ವ್ಯಾಪ್ತಿ ಕೃಷ್ಣಗಿರಿ ಲೇನ್ ನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಗಾಂಜಾ ಸಿಕ್ಕಿತ್ತು. ಈ ಸಂಬಂಧ ಜೋಸೆಫ್ ಮತ್ತು ರಾಜಾ ಎಂಬುವರನ್ನು ಬಂಧಿಸಲಾಗಿದೆ ಎಂದರು.
ಸೀಮಂತ್ ಕುಮಾರ್ ಸಿಂಗ್ ಅವರು ಇನ್ಸ್ ಪೆಕ್ಟರ್ ಗಳಾದ ಸೂರ್ಯ ಪ್ರಕಾಶ್ ಮತ್ತು ವೆಂಕಟರಮಣಪ್ಪ ಅವರಿಗೆ ಪ್ರಶಂಸನೀಯ ಪತ್ರ ನೀಡಿದ್ದಾರೆ. ಇದೇ ವೇಳೆ ಪೊಲೀಸರಾದ ವೆಂಕಟರಮಣಪ್ಪ, ಮಹೇಂದ್ರ, ಚೇತನ್ ಮತ್ತು ರಮೇಶ್ ಅವರಿಗೆ ನಗದು ಬಹುಮಾನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


