ಪಾದಚಾರಿಗಳಿಗೆ ಗುದ್ದಿದ ಗೂಡ್ಸ್ ಆಟೋ: ಭೀಕರ ಅಪಘಾತದಲ್ಲಿ ಯುವತಿ ಸಾವು
ಕೊಳ್ಳೇಗಾಲ ಪಟ್ಟಣದ ಮುಂಡಿಗುಂಡ ಗ್ರಾಮದ ಕಡೆಗೆ ಕೊಳ್ಳೇಗಾಲದಿಂದ ತೆರಳುತ್ತಿದ್ದ ಗೂಡ್ಸ್ ಆಟೋ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ನಾಲ್ವರು ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಕೊಳ್ಳೇಗಾಲ: ಪಟ್ಟಣದ ಮುಂಡಿಗುಂಡ ಗ್ರಾಮದ ಕಡೆಗೆ ಕೊಳ್ಳೇಗಾಲದಿಂದ ತೆರಳುತ್ತಿದ್ದ ಗೂಡ್ಸ್ ಆಟೋ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ನಾಲ್ವರು ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಪಟ್ಟಣದ ಮುಡಿಗುಂಡ ಗ್ರಾಮದವರಾದ ನಿವೇದಿತಾ(38), ಪವಿತ್ರ(36), ರಕ್ಷಿತಾ(12), ಪವಿತ್ರ(21) ಅಪಘಾತಕ್ಕೊಳಗಾದವರು. ಈ ನಾಲ್ವರ ಪೈಕಿ ಯುವತಿ ಪವಿತ್ರ (21)ಮೃತಪಟ್ಟಿದ್ದಾಳೆ.
ಇಲ್ಲಿನ ಮುಡಿಗುಂಡ ಗ್ರಾಮದಲ್ಲಿರುವ ಮುಳ್ಳಾಚ್ಚಮ್ಮ ದೇವಾಲಯಕ್ಕೆ ಪೂಜೆಗೆಂದು ತೆರಳುತ್ತಿದ್ದ ನಿವೇದಿತಾ, ಪವಿತ್ರ, ರಕ್ಷಿತಾ, ಪವಿತ್ರ(21) ಎಂಬುವರು ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದರು. ಈ ವೇಳೆ ಕೊಳ್ಳೇಗಾಲದ ಕಡೆಯಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೂ ತೀವ್ರ ಪೆಟ್ಟಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಪವಿತ್ರ(21) ಅಸುನೀಗಿದ್ದಾಳೆ.
ಉಳಿದ ಮೂವರ ಪರಿಸ್ಥಿತಿ ಗಭೀರವಾಗಿದ್ದು, ಜೆಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗುಳಿಪುರ ನಂದೀಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


