ರಾಜ್ಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಪ್ರತಿಭಟನೆ, ಎಸ್ ಡಿಪಿಐ ಮುಖಂಡರ ಬಂಧನ

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್‌ಡಿಪಿಐ) ಹಲವು ಮುಖಂಡರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಪ್ರತಿಭಟನೆ, ಎಸ್ ಡಿಪಿಐ ಮುಖಂಡರ ಬಂಧನ
ಬಾಬರಿ ಮಸೀದಿ
Published On :

ಮಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್‌ಡಿಪಿಐ) ಹಲವು ಮುಖಂಡರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಇಂದು ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಆಶ್ರಫ್ ಮಾಚಾರ್, ಮಂಗಳೂರು ನಗರ ಕಾರ್ಪೋರೇಟರ್ ಮುನೀಬ್ ಬೆಂಗ್ರೆ ಮತ್ತು ಹಲವು ಜಿಲ್ಲಾ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದ್ದನ್ನು ಎಸ್ ಡಿಪಿಐ ಮುಖಂಡರು ಖಂಡಿಸಿದರು. ಅಲ್ಲದೆ ಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.