ರಾಜ್ಯ

ಆಶಾ‌ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ: ದೂರು ಸ್ವೀಕರಿಸದ‌ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ‌ ಗುಂಪೊಂದು ದಾಳಿ ನಡೆಸಿದ ಎನ್ನಲಾದ‌ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಆಶಾ‌ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ: ದೂರು ಸ್ವೀಕರಿಸದ‌ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ
ಆಶಾ‌ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ
Published On :

ಬೆಂಗಳೂರು:  ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ‌ ಗುಂಪೊಂದು ದಾಳಿ ನಡೆಸಿದ ಎನ್ನಲಾದ‌ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಹೆಗಡೆ ನಗರದ ಕೃಷ್ಣ ವೇಣಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಡಿಸಿಪಿ ಜತೆ ಮಾತನಾಡಿದ ಅಶ್ವತ್ಥ ನಾರಾಯಣ್, ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ‌ ನೀಡಿದರು.

ಬಳಿಕ ಮಾತನಾಡಿದ ಅವರು, ಯಾರೇ‌ ಹಲ್ಲೆ ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಇಲ್ಲಿ ಜಾತಿ ಧರ್ಮ ಮುಖ್ಯವಲ್ಲ. ಅಗತ್ಯ ಭದ್ರತೆ ನೀಡುತ್ತೇವೆ. ಹೆದರುವುದು ಬೇಡ ಎಂದು ಅಭಯ ನೀಡಿದರು.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.