ಪಾದರಾಯನಪುರ ಘಟನೆ ಸಿಸಿಬಿಗೆ ವರ್ಗಾವಣೆ: ಬಸವರಾಜ್ ಬೊಮ್ಮಾಯಿ
ನಗರದ ಪಾದರಾಯನಪುರದಲ್ಲಿ ಭಾನುವಾರ ಕೊರೋನಾ ಶಂಕಿತರನ್ನು ಹೋಂ ಕ್ವಾರಂಟೈನ್ ಗೆ ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯರ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಭಾನುವಾರ ಕೊರೋನಾ ಶಂಕಿತರನ್ನು ಹೋಂ ಕ್ವಾರಂಟೈನ್ ಗೆ ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯರ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾನುವಾರ ಪಾದರಾಯನಪುರದ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಸೌಮೇಂದು ಮುಖರ್ಜಿ ನೇತೃತ್ವದ ಸಿಸಿಬಿ ಪೊಲೀಸರ ತಂಡ, ತನಿಖೆಯನ್ನು ನಡೆಸಿ ವರದಿ ನೀಡಲಿದೆ ಎಂದರು.
ಪಾದರಾಯನಪುರದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಅವರ ಪಾತ್ರ ಏನು ಎಂಬುದು ಕುರಿತು ತನಿಖೆ ನಡೆಸಲಾಗುವುದು. ಇನ್ನು, ಅಗತ್ಯವಿದ್ದಲ್ಲಿ, ಜಮೀರ್ ಅವರನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.
ಸಿಸಿಬಿ ತನಿಖೆಯ ಸಮಗ್ರ ವರದಿ ಬಂದ ನಂತರ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


