ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 130 ಬಲಿ, ಬೆಂಗಳೂರಿನಲ್ಲಿ 1918 ಸೇರಿ 5851 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4810ಕ್ಕೆ...

ರಾಜ್ಯದಲ್ಲಿ ಇಂದು ಕೊರೋನಾಗೆ 130 ಬಲಿ, ಬೆಂಗಳೂರಿನಲ್ಲಿ 1918 ಸೇರಿ 5851 ಮಂದಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4810ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 26 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 130 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1918 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 5851 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,665ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು 2,83,665 ಪ್ರಕರಣಗಳ ಪೈಕಿ 1,97,625 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 81, 211 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.