ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಮುಖ್ಯಮಂತ್ರಿ
ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನ'ದ ಹಾರ್ದಿಕ ಶುಭಕಾಮನೆಗಳು. ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ಕೊರೋನಾ ಪರಿಸ್ಥಿತಿಗಳ ವಿಭಿನ್ನ ಸವಾಲುಗಳ ನಡುವೆಯೂ ಕರ್ತವ್ಯನಿಷ್ಠರಾಗಿರುವ ನಮ್ಮ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನ'ದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ನಮಿಸುತ್ತಾ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ, ಶಿಕ್ಷಣದ ಮೂಲಕ ಭವಿಷ್ಯದ ಸಶಕ್ತ ಪ್ರಜೆಗಳನ್ನು ರೂಪಿಸುವ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತಿರುವ ಎಲ್ಲ ನಮ್ಮ ಶಿಕ್ಷಕರಿಗೆ ಗೌರವಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


