ರಾಜ್ಯ

ಬೆಂಗಳೂರು: ರೌಡಿಶೀಟರ್ ಭೀಕರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಒಬ್ಬರನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ರೌಡಿಶೀಟರ್ ಭೀಕರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಒಬ್ಬರನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುಹೈಲ್ ಆಲಿಯಾಸ್ ಲಂಗ್ಡಾ ಕೊಲೆಯಾಗಿದ್ದು, ಈತ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದಾರೆ.

ಕಳೆದ ಬುಧವಾರ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರಸ್ತೆಯಲ್ಲಿ ಲಂಗ್ಡಾ ಒಂಟಿಯಾಗಿ ಹೋಗುತ್ತಿದ್ದಾಗ ಆತನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಈತ ರೌಡಿಶೀಟರ್ ತನ್ವೀರ್‌ನೊಂದಿಗೆ ಗುರುತಿಸಿಕೊಂಡಿದ್ದನು. ಎದುರಾಳಿಗಳು ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಸಿಟಿವಿ ಆಧರಿಸಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.