ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಮುಷ್ಕರ: ಹಲವು ನೌಕರರ ವರ್ಗಾವಣೆ, ಮುಂದುವರಿದ ಪ್ರಯಾಣಿಕರ ಪರದಾಟ
ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಸಹ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಓಡಾಟಕ್ಕೆ ಖಾಸಗಿ ಬಸ್ಸುಗಳು ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವಾಗಲೂ ಗಿಜಿಗಿಡುತ್ತಿದ್ದ ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್ ನಲ್ಲಿ ಇಂದು ಖಾಲಿ ಖಾಲಿಯ ವಾತಾವರಣ.
ಹಲವು ಕಡೆಗಳಲ್ಲಿ ಅಧಿಕಾರಿಗಳ ವರ್ಗಾವಣೆ: ಸಾರಿಗೆ ಇಲಾಖೆ ನೌಕರರ ಮುಷ್ಕರದ ಮಧ್ಯೆಯೇ ಮಂಗಳೂರು, ದಾವಣಗೆರೆ, ಮಂಡ್ಯ, ಮೈಸೂರು ಘಟಕಗಳಿಂದ ನೌಕರರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಿ ವರ್ಗಾವಣೆ ಮಾಡಲಾಗಿದೆ.
ಚಿತ್ರದುರ್ಗದಲ್ಲಿ ಅಧಿಕಾರಿಗಳು ಸಾರಿಗೆ ಸಿಬ್ಬಂದಿಯ ಮನವೊಲಿಸಿ ಎರಡು ಕೆಎಸ್ ಆರ್ ಟಿಸಿ ಬಸ್ಸುಗಳನ್ನು ರಸ್ತೆಗಿಳಿಸಿವೆ ಎಂದು ತಿಳಿದುಬಂದಿದೆ.
ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನನುಕೂಲವಾಗುವುದು ಬೇಡವೆಂದು ನೈರುತ್ಯ ರೈಲ್ವೆ ಮೆಮು ರೈಲುಗಳ ಸಂಚಾರ ವಿಸ್ತರಿಸಿದೆ.
ಇನ್ನೊಂದೆಡೆ ಕೊರೋನಾ ಎರಡನೇ ಅಲೆ ತೀವ್ರವಾಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ 10 ನಗರಗಳಲ್ಲಿ ಇಂದು ರಾತ್ರಿಯಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ವಿಧಿಸಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜನರು ಹೊರಗಡೆ ಓಡಾಡುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


