ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು
ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.

ಮಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.
‘ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭಗಳಲ್ಲಿ, ನೀವು ನನಗೆ ಕರೆ ಮಾಡಬಹುದಾಗಿದೆ. ಕಳೆದ ಎರಡು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಈ ತಿಂಗಳ 8 ಮತ್ತು 9 ರಂದು ಕಡಬ ತಾಲ್ಲೂಕಿನ ಪಾಲ್ಟಾಡಿ ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ತಾಯಿಯ ಮನೆಯಲ್ಲಿ ನಡೆದ 'ಧರ್ಮ ನೆಮೋತ್ಸವ'ದಲ್ಲಿ ಭಾಗವಹಿಸಿದ ಗಣ್ಯರಲ್ಲಿ ಶ್ರೀನಿವಾಸ ಪೂಜಾರಿ ಸೇರಿದ್ದರು. ಪೂಜಾರಿಯವರು ಏಪ್ರಿಲ್ 8ರಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


