ಸರ್ಕಾರಿ ರಜೆ ದಿನಗಳಲ್ಲೂ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ: ಚು.ಆಯೋಗಕ್ಕೆ ಡಿಕೆಶಿ ಪತ್ರ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರಿ ರಜೆ ದಿನಗಳಲ್ಲೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರಿ ರಜೆ ದಿನಗಳಲ್ಲೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.
ರಜಾ ದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಡಿ.ಕೆ.ಶಿವಕುಮಾರ್ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ ಇದ್ದರೂ ಅದರಲ್ಲಿ 4 ದಿನ ಸಾರ್ವತ್ರಿಕ ರಜಾ ದಿನ ಇರುತ್ತದೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಳಿಗೆ ನಾಮಪತ್ರ ಸಲ್ಲಿಸಲು ಸಾಕಷ್ಟು ಕಾಲಾವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.
ಈ ವಿಚಾರ ಸೂಕ್ಷ್ಮವಾಗಿದ್ದು ಏ.13 ಮತ್ತು 14 ರಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. 1 ಮಹಾನಗರ ಪಾಲಿಕೆ, 5 ನಗರಸಭೆ, 2 ಪುರಸಭೆ, 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


