ರಾಜ್ಯದಲ್ಲಿ ಕೊರೋನಾ ಸ್ಫೋಟ: ಬೆಂಗಳೂರಿನಲ್ಲಿ 6,387 ಸೇರಿ ಇಂದು 9,579 ಪಾಸಿಟಿವ್, 52 ಸಾವು!
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 6,387 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,88,369ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 40 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 2,767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,85,924ಕ್ಕೆ ಏರಿಕೆಯಾಗಿದೆ. ಇನ್ನು 75,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 470 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 6,387, ಬೀದರ್ 465, ಮೈಸೂರು 362, ಕಲಬುರಗಿ 335, ತುಮಕುರು 239, ಬೆಂಗಳೂರು ಗ್ರಾಮಾಂತರದಲ್ಲಿ 192 ಸೋಂಕು ಪತ್ತೆಯಾಗಿದೆ.
ಸಕಾರಾತ್ಮಕ ಪ್ರಕರಣಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಜಿಲ್ಲೆ ಅಗ್ರಸ್ಥಾನದಲ್ಲಿದ್ದು, ಒಟ್ಟು 4,88,369, ಮೈಸೂರು 58,573, ಬಳ್ಳಾರಿ 40,692.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


