ರಾಜ್ಯ

ಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನೇಣಿಗೆ ಶರಣು!

ವರ್ಷದಿಂದ ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನೇಣಿಗೆ ಶರಣು!
ಶಿಲ್ಪಾ ಜಿ.ಬಿ.
Published On :

ಬೆಂಗಳೂರು: ವರ್ಷದಿಂದ ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.

ಮಹಿಳಾ ಈಜುಗಾರ್ತಿಯಾಗಿದ್ದ ಜಿ.ಬಿ. ಶಿಲ್ಪಾ (41)  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶಿಕ್ಷಣ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರೂ ಕೆಲಸ ಪಡೆಯಲಾಗದೆ ಹೋದ ಬಗ್ಗೆ ಡೆತ್ ನೋಟ್ ನಲ್ಲಿ ನೋವು ತೋಡಿಕೊಂಡಿರುವ ಶಿಲ್ಪಾ ಪತಿ ಮನೆಯಲ್ಲಿಲ್ಲದ ವೇಳೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರೀಡಾ ಶಾಲೆಯೊಂದರಲ್ಲಿ ಕೆಲ ವರ್ಷಗಳಿಂದ ಕೋ್ಚ್ ಅಗಿ ಕೆಲಸ ಮಾಡುತ್ತಿದ್ದ ಈಕೆ ಕಳೆದ ವರ್ಷ ಲಾಕ್ ಡೌನ್ ನಂತರದಲ್ಲಿ ಕೆಲಸ ಕಳೆದುಕೊಂಡಿದ್ದರು.

ಘಟನೆ ಸಂಬಂಧ ಜಯನಗರ ಪೋಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.