ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್
ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.

ಬೆಂಗಳೂರು: ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ರಾತ್ರಿ 10 ಗಂಟೆಗೆ ಕೊರೊನಾ ಕರ್ಫ್ಯೂ ಜಾರಿಯಾಗುವುದರಿಂದ ಹೊಟೇಲ್ ಕಾರ್ಮಿಕರು ಮನೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾತ್ರಿ 10 ಗಂಟೆ ಬದಲು 11 ಗಂಟೆಗೆ ವಿಸ್ತರಣೆ ಬೆಳಿಗ್ಗೆ 5 ಗಂಟೆ ಬದಲು 6 ಗಂಟೆವರೆಗೂ ವಿಸ್ತರಿಸುವಂತೆ ಮನವಿ ಮಾಡಿದ್ದರು.
ಸಂಘದವರ ಮನವಿಯನ್ನುಸಚಿವ ಸುಧಾಕರ್ ತಿರಸ್ಕರಿಸಿ, ಕೊರೊನಾ ನಿಯಂತ್ರಣ ಮಾಡುವುದು ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಿನ ಆತಂಕ ಇದೆ. ಹೀಗಾಗಿ ಸಮಯ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಇಂದು 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. ಇನ್ನು 52 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


