ರಾಜ್ಯ

ಮಂಗಳೂರು: ಯುವತಿಗೆ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ ಕಾಮುಕ ಅರೆಸ್ಟ್

ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮಾಸ್ಕ್ ಹಾಗೂ ಟೋಪಿ ಧರಿಸಿ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು: ಯುವತಿಗೆ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ ಕಾಮುಕ ಅರೆಸ್ಟ್
ಆರೋಪಿ ಯುವಕ
Published On :

ಮಂಗಳೂರು:  ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮಾಸ್ಕ್ ಹಾಗೂ ಟೋಪಿ ಧರಿಸಿ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.

ಘಟನೆಯಿಂದ ಬೆದರಿದ ಯುವತಿ ಸಮೀಪದಲ್ಲಿದ್ದ ಟೈಲರಿಂಗ್ ಅಂಗಡಿಗೆ ನುಗ್ಗಿ ಸಹಾಯವನ್ನು ಕೋರಿದ್ದಳು.. ಸ್ಥಳದಲ್ಲಿದ್ದ ಜನರಿಗೆ ಅವನ ಕೃತ್ಯದ ಬಗ್ಗೆ ತಿಳಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದ, ಆ ವೇಳೆ ಅಲ್ಲಿದ್ದವರೊಬ್ಬರು ಯುವಕನ ಫೋಟೋವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು.

ಇದಕ್ಕೆ ಮುನ್ನ ಸಹ ಈ ವ್ಯಕ್ತಿ ಮಹಿಳೆಯರೆದುರು ಇಂತಹುದೇ ಕೃತ್ಯ ನಡೆಸಿದ್ದನೆನ್ನಲಾಗಿದ್ದು ಯುವತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಒಂದು ಗಂಟೆಯೊಳಗೆ ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಿದ್ದಾರೆ. ಉಳ್ಲಾಲ  ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಶಿವಕುಮಾರ್ ತಂಡ ಈ ಕಾರ್ಯಾಚರಣೆ ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.