ಮಸ್ಕಿ ಉಪಚುನಾವಣೆ: ಹಣ ವಿತರಿಸುತ್ತಿದ್ದ ಇಬ್ಬರು, ಹಣ ಸ್ವೀಕರಿಸಿದ ಓರ್ವ ಮಹಿಳೆ ಸೆರೆ
ಚುನಾವಣೆ ಸಂಬಂಧ ಹಣ ಹಂಚಿಕೆ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಹಾಗೂ ನಗದು ಸ್ವೀಕರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಜಿಲ್ಲಾ ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಮಹಿಳೆಗೆ ಹಣವನ್ನು ವಿತರಿಸಿದ ವ್ಯಕ್ತಿ ಪರಾರಿಯಾಗಿದ್ದಾನೆ.

ರಾಯಚೂರು: ಚುನಾವಣೆ ಸಂಬಂಧ ಹಣ ಹಂಚಿಕೆ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಹಾಗೂ ನಗದು ಸ್ವೀಕರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಜಿಲ್ಲಾ ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಮಹಿಳೆಗೆ ಹಣವನ್ನು ವಿತರಿಸಿದ ವ್ಯಕ್ತಿ ಪರಾರಿಯಾಗಿದ್ದಾನೆ.
ಹರ್ವಾಪುರದಲ್ಲಿ ಹಣ ವಿತರಿಸುವ ವಿಡಿಯೋ ತುಣುಕು ವೈರಲ್ ಆದ ನಂತರ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಚುನಾವಣಾ ಅಧಿಕಾರಿಗಳ ದೂರಿನ ನಂತರ ಪೊಲೀಸರು ಹಾಸನದ ಹೊಳೆನರಸೀಪುರ ಪಟ್ಟಣದ ಅಮಿತ್ ನನ್ನು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ದುರ್ಗಾ ಕ್ಯಾಂಪ್‌ನಲ್ಲಿ ಮತದಾರರಿಗೆ ಹಣ ವಿತರಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತ ಚಿಟ್ಟಿಬಾಬು ಅವರನ್ನು ಬಂಧಿಸಲಾಯಿತು.
ಹಣ ಹಂಚಿಕೆ ಮಾಡಿದ್ದಕ್ಕಾಗಿ ಹಾಸನದ ಮೂಲದ ಹೇಮಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಹಣವನ್ನು ಸ್ವೀಕರಿಸಿದ್ದಕ್ಕಾಗಿ ತಾಯಮ್ಮನನ್ನು ಬಂಧಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


