ಬೆಂಗಳೂರು: 84 ಲಕ್ಷ ರು. ಮೌಲ್ಯದ ಗಾಂಜಾ ಜಪ್ತಿ; ಇಬ್ಬರ ಬಂಧನ
ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22) ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೂರ್ತಿ (40) ಬಂಧಿತ ಆರೋಪಿಗಳು. ಹೊರ ರಾಜ್ಯದಿಂದ ಗಾಂಜಾ ತರಿಸಿಕೊಂಡು ನಗರದ ವಿವಿಧೆಡೆ ಮಾರಾಟ ಮಾಡುತ್ತಿದ್ದರು.
'ಕೋರಮಂಗಲದ ಬಳ್ಳಾರಿ ಕಾಲೊನಿ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಂದಿದ್ದರು. ಈ ಮಾಹಿತಿ ಆಧರಿಸಿ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಲಾಯಿತು' ಎಂದು ಪೊಲೀಸರು ತಿಳಿಸಿದರು.
'ಆರೋಪಿಗಳಿಂದ 84.60 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ತೂಕದ ಯಂತ್ರ, ಒಂದು ವಾಹನ, 4 ಸಾವಿರ ನಗದು, ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ' ಎಂದು ಮಾಹಿತಿ ನೀಡಿದರು.
'ಆರೋಪಿಗಳು ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಅರಕು ಗುಡ್ಡಗಾಡು ಪ್ರದೇಶದ ಆದಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದರು. ಅದನ್ನು ರಾಜ್ಯಕ್ಕೆ ತಂದು ಕೋರಮಂಗಲ, ಎಚ್.ಎಸ್.ಆರ್.ಬಡಾವಣೆ, ಕೆ.ಆರ್.ಪುರ, ಕೆ.ಆರ್.ಪೇಟೆ ಸೇರಿದಂತೆ ಹಲವೆಡೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದರು ಎಂದೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


