ಅಂಬೇಡ್ಕರ್ ಸಮಾನತೆಯ ನಿಜವಾದ ಹೋರಾಟಗಾರ, ಸಮಸ್ತ ಶೋಷಿತರ ಧ್ವನಿ: ಸಂಸದ ಎ ನಾರಾಯಣಸ್ವಾಮಿ
ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಮಸ್ತ ಶೋಷಿತ ಸಮುದಾಯದ ಧ್ವನಿಯಾಗಿದ್ದರು, ಅವರು ಸಮಾನತೆಯ ನಿಜವಾದ ಹೋರಾಟಗಾರ ಅವರನ್ನು ಪಡೆದಿದ್ದು ದೇಶದ ಸೌಭಾಗ್ಯ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಮಸ್ತ ಶೋಷಿತ ಸಮುದಾಯದ ಧ್ವನಿಯಾಗಿದ್ದರು, ಅವರು ಸಮಾನತೆಯ ನಿಜವಾದ ಹೋರಾಟಗಾರ ಅವರನ್ನು ಪಡೆದಿದ್ದು ದೇಶದ ಸೌಭಾಗ್ಯ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು. ‘ಅಂಬೇಡ್ಕರ್ ಜನಿಸದೇ ಇದ್ದಿದ್ದರೆ ದೇಶದ ಬಹುಪಾಲು ಜನರ ಸ್ಥಿತಿ ಊಹಿಸಲು ಅಸಾಧ್ಯವಾಗಿತ್ತು. ನಾನು ಶಾಸಕ, ಸಚಿವ, ಸಂಸದನಾಗಿದ್ದಕ್ಕೆ ಅಂಬೇಡ್ಕರ್ ಕಾರಣ’ ಎಂದು ಹೇಳಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು , ‘ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಹಾನ್ ಹೋರಾಟಗಾರ ಅಂಬೇಡ್ಕರ್. ಅಸ್ಪೃಶ್ಯತೆಯನ್ನು ತೊಲಗಿಸಲು ಹೋರಾಟ ಮಾಡಿದರು. ದಲಿತರ ಧ್ವನಿಯಾಗಿದ್ದರು’ ಎಂದು ಕೊಂಡಾಡಿದರು. ಶಾಸಕನಾಗಿದ್ದ ನಾನು ಸಂಸದನಾಗಲು ಅಂಬೇಡ್ಕರ್ ಅವರೇ ಕಾರಣ ಎಂದು ಹಾಡಿ ಹೊಗಳಿದರು. ಸಮಾಜದಲ್ಲಿ ಎಲ್ಲಾ ವರ್ಗದವರಿಗೂ ಶಿಕ್ಷಣ ನೀಡಬೇಕು ಎಂಬುದು ಅವರ ಮಹಾದಾಸೆಯಾಗಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


