ರಾಜ್ಯ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಜೆ.ಸಿ. ಲಿನ್ ವಿಧಿವಶ

ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಜೆ ಸಿ ಲಿನ್(88) ಇಂದು ವಿಧಿವಶರಾಗಿದ್ದಾರೆ.

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಜೆ.ಸಿ. ಲಿನ್ ವಿಧಿವಶ
ಜೆ ಸಿ ಲಿನ್
Published On :

ಬೆಂಗಳೂರು: ಕರ್ನಾಟಕದ ಮಾಜಿ  ಮುಖ್ಯ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಜೆ ಸಿ ಲಿನ್(88) ಇಂದು ವಿಧಿವಶರಾಗಿದ್ದಾರೆ. 

ವಯೋಸಹಜ ಕಾಯಿಲೆಗಳಿಂದ ಬೆಂಗಳೂರಿನ ಕಾಸಗಿ ಆಸ್ಪತ್ರೆಯಲ್ಲಿ ಲಿನ್ ಕೊನೆಯಿಸಿರೆಳೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ,ದೇವರಾಜ ಅರಸು, ರಾಮಕೃಷ್ಣ ಹೆಗಡೆ,ಬಂಗಾರಪ್ಪ ಮತ್ತು ವೀರಪ್ಪ ಮೊಯ್ಲಿ ಅವರ ಸರ್ಕಾರಗಳಲ್ಲಿ ಆಯಕಟ್ಟಿನ ವಿವಿಧ ಹುದ್ದೆಗಳಲ್ಲಿ ಬಹು ದಕ್ಷತೆಯಿಂದ ಕಾರ್ಯನಿರ್ವಹಿಸಿ ಹೆಸರು ಮಾಡಿದ್ದ ಲಿನ್ 1992-94ರ ನಡುವೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ದಕ್ಷ ಹಾಗೂ ಪ್ರಾಮಾಣಿಕ ಕೆಲಸಗಳಿಂದ ನಾಗರಿಕ ಸೇವೆ ಕ್ಷೇತ್ರಕ್ಕೆ ಹೊಸ ಹೊಳಪು ನಿಡಿದ್ದ ಲಿನ್ ಅವರ ಕಾರ್ಯವೈಖರಿ ಪ್ರಸ್ತುತದ ಅನೇಕ ನ ಐಎಎಸ್ ಅಧಿಕಾರಿಗಳಿಗೆ ಸ್ಫೂರ್ತಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.