ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ
ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

ಬೆಂಗಳೂರು: ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಔಷಧಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.
ಇದಕ್ಕೆ ಸರಿಯಾಗಿ ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಹಲವರು ಮುಂದಾಗಿದ್ದು ಕಾಳಸಂತೆಯಲ್ಲಿ ಔಷಧ ಮಾರಾಟವಾಗುತ್ತಿದೆ. ಕೊರೋನಾ ರೋಗಿಗಳಿಗೆ ಕೊಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು ಪ್ರಕರಣ ಬೇಧಿಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಮೂವರನ್ನು ಬಂಧಿಸಿದ್ದಾರೆ.
ಈ ಮೂವರು ರೆಮೆಡಿಸಿವಿರ್ ನ್ನು ಅಕ್ರಮವಾಗಿ ಸಂಗ್ರಹಿಸಿ ನಿಗದಿತ ಬೆಲೆಗಿಂತ ಹೆಚ್ಚು ಪ್ರತಿ ಲಸಿಕೆಗೆ 10 ಸಾವಿರದ 500 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿಗಳನ್ನು ರಾಜೇಶ್, ಸಾಕೀಬ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದ್ದು, ರಾಜೇಶ್ ಮತ್ತು ಸಾಕೀಬ್ ಗುರುಶ್ರೀ ಮೆಡಿಕಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರ ವಿರುದ್ಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮತ್ತು ಮತ್ತೊಬ್ಬ ಆರೋಪಿ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


