ರಾಜ್ಯ

ಕೋವಿಡ್ ಎಫೆಕ್ಟ್: ವಿಧಾನಸೌಧಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧ

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧಕ್ಕೆ ನಿಗದಿತ ಭೇಟಿ ಹೊರತುಪಡಿಸಿ ಸಾರ್ವಜನಿಕರ ಸಾಮಾನ್ಯ ಪ್ರವೇಶಕ್ಕೆ ನಿರ್ಬಂಧ ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕೋವಿಡ್ ಎಫೆಕ್ಟ್: ವಿಧಾನಸೌಧಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧ
ವಿಧಾನಸೌಧ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧಕ್ಕೆ ನಿಗದಿತ ಭೇಟಿ ಹೊರತುಪಡಿಸಿ ಸಾರ್ವಜನಿಕರ ಸಾಮಾನ್ಯ ಪ್ರವೇಶಕ್ಕೆ ನಿರ್ಬಂಧ ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಸಚಿವರ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಯಲ್ಲಿ ನಿತ್ಯ ಕೋವಿಡ್-19 ಸೋಂಕಿನ ಪ್ರಕರಣ ವರದಿಯಾಗುತ್ತಲೇ ಇವೆ. ಹೀಗಾಗಿ ಸಚಿವಾಲಯದ ಸಿಬ್ಬಂದಿ, ಅಧಿಕಾರಿ ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. 

ವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವ ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನು ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.