ರಾಜ್ಯ

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್ 

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್ 
ಆರೋಗ್ಯ ಸಚಿವ ಡಾ. ಕೆ. ಸುಧಾಕರ್
Published On :

ಬೆಂಗಳೂರು: ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಸಿದ್ದಾರೆ. 

ವಿಧಾನಸೌದದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಇತರೆ ರೋಗಿಗಳು ಈಗಾಗಲೇ ಬೆಡ್ ನಲ್ಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗಳು ಏಕಾಏಕಿ ಕಳುಹಿಸಲು ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳ ಜೊತೆ ಈಗಾಗಲೇ ಈ ಸಂಬಂಧ ಮಾತುಕತೆ ನಡೆದಿದೆ. ರೋಗಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಲು 48 ಗಂಟೆ ಸಮಯ ಕೇಳಿದ್ದಾರೆ. ಸರ್ಕಾರ ನಿಗದಿಪಡಿಸಿರುವ ಹಾಸಿಗೆ ವ್ಯವಸ್ಥೆಗಳನ್ನು ಖಾಸಗಿಯವರು ಮಾಡಲೇಬೇಕು. ಇಲ್ಲದೇ ಹೋದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರ ನಿಗದಿ ಮಾಡಿರುವ ಶೇ. 50 ರಷ್ಟು ಬೆಡ್ ಗಳನ್ನು ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ ಕೊಡಲೇಬೇಕು. ಇಲ್ಲದೆ ಹೋದಲ್ಲಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.