ರಾಜ್ಯ

ರಾಜ್ಯದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು ಲಭ್ಯ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ: ಬಿಜೆಪಿ

ರಾಜ್ಯದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು, ಲಭ್ಯವಿದ್ದು, ಯಾವುದೇ ವದಂತಿಗಳಿಗೆ ಜನರು ಕಿವಿಗೂಡಬೇಡಿ ಎಂದು ರಾಜ್ಯ ಬಿಜೆಪಿ ಹೇಳಿದೆ.

ರಾಜ್ಯದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು ಲಭ್ಯ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ: ಬಿಜೆಪಿ
ರೆಮಿಡಿಸಿವಿರ್
Published On :

ಬೆಂಗಳೂರು: ರಾಜ್ಯದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು, ಲಭ್ಯವಿದ್ದು, ಯಾವುದೇ ವದಂತಿಗಳಿಗೆ ಜನರು ಕಿವಿಗೂಡಬೇಡಿ ಎಂದು ರಾಜ್ಯ ಬಿಜೆಪಿ ಹೇಳಿದೆ.

ಈ ಕುರಿತು ರಾಜ್ಯ ಬಿಜೆಪಿ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಎಪ್ರಿಲ್‌ 11 ರಿಂದ 17 ರ ವರೆಗೆ 47,726 ರೆಮಿಡೆಸಿವಿರ್‌ ಚುಚ್ಚುಮದ್ದು‌ ಪೂರೈಸಲಾಗಿದೆ.ರಾಜ್ಯದಲ್ಲಿ ಒಟ್ಟು 26,873 ವಯಲ್ಸ್ ‌ ದಾಸ್ತಾನು ಇದೆ.70 ಸಾವಿರ ಇಂಜಕ್ಷನ್‌ ಖರೀದಿಗೆ ಸರ್ಕಾರ ಆದೇಶ ನೀಡಿರುವುದಾಗಿ ತಿಳಿಸಲಾಗಿದೆ.

ಕೋವಿಡ್ ವಿರುದ್ಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಮರ್ಥವಾಗಿ ಹೋರಾಡುತ್ತಿದೆ. 
 7 ಮೆಡಿಕಲ್ ಆಕ್ಸಿಜನ್ ತಯಾರಿಕಾ ಘಟಕಗಳು ದಿನಕ್ಕೆ 812 ಟನ್‌ ಆಕ್ಸಿಜನ್ ಉತ್ಪಾದಿಸುತ್ತಿವೆ. ಎಪ್ರಿಲ್ 18 ರಂದು 305 ಟನ್ ಆ‌ಕ್ಸಿಜನ್ ಬಳಕೆಯಾಗಿದ್ದು, 19417 ಮೆಡಿಕಲ್‌ ಸಿಲಿಂಡರ್‌ ಲಭ್ಯವಿದೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರೋಣ ಎಂದು ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.