ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ, ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ: ಸಚಿವ ಡಾ. ಕೆ.ಸುಧಾಕರ್
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರಿದಿರುವುದರಿಂದ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ತುರ್ತು ಪರಿಸ್ಥಿತಿ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರಿದಿರುವುದರಿಂದ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ತುರ್ತು ಪರಿಸ್ಥಿತಿ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ವೈದ್ಯಕೀಯ ಕಾಲೇಜುಗಳು ಅದರಲ್ಲೂ ಬೆಂಗಳೂರಿನಲ್ಲಿರುವ 13 ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕೋವಿಡ್ ಯೇತರ ಪ್ರಕರಣಗಳಲ್ಲಿ ತಾಯಿ ಮತ್ತು ಮಗುವಿನ ಹಾಸಿಗೆಗಳು, ಡಯಾಲಿಸಿಸ್ ಹಾಸಿಗೆಗಳು ಹೊರತುಪಡಿಸಿ ಎಲ್ಲಾ ತುರ್ತು ಚಿಕಿತ್ಸೆ ಮಾಡುವಂತಹ ಹಾಸಿಗೆಗಳನ್ನು ಹೊರತುಪಡಿಸಿ ಉಳಿದವುಗಳೆಲ್ಲವನ್ನೂ ಸಂಪೂರ್ಣ ಇನ್ನು ಮೂರ್ನಾಲ್ಕು ದಿನಗಳೊಳಗೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲಿಡಬೇಕೆಂದು ಸರ್ಕಾರ ಇಂದು ಆದೇಶ ಹೊರಡಿಸುತ್ತಿದೆ ಎಂದು ವಿವರಿಸಿದರು.
ಹೀಗೆ ಮಾಡುವುದರಿಂದ ಬೆಂಗಳೂರು ನಗರವೊಂದರಲ್ಲಿಯೇ ಏಳೂವರೆ ಸಾವಿರ ಹಾಸಿಗೆಗಳು ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುತ್ತದೆ. ಎಲ್ಲಾ 30 ಹಾಸಿಗೆಗಳಿಗಿಂತ ಹೆಚ್ಚು ಇರುವ ಖಾಸಗಿ ಆಸ್ಪತ್ರೆಗಳು ಬೆಂಗಳೂರಿನಲ್ಲಿ ಕಡ್ಡಾಯವಾಗಿ ಕೋವಿಡ್ ಯೇತರ ಚಿಕಿತ್ಸೆಗೆ ಮಾತ್ರ ಮೀಸಲಿಡುವಂತಹ ಆದೇಶ ಹೊರಡಿಸುತ್ತೇವೆ. ಇದರ ಜೊತೆಗೆ 30 ಹಾಸಿಗೆಗಳಿಗಿಂತ ಮೇಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 80ರ ಅನುಪಾತದಲ್ಲಿ ಹಾಸಿಗೆಗಳನ್ನು ಕೋವಿಡ್ ಗೆ ಮಾತ್ರ ಇನ್ನು ಮೂರ್ನಾಲ್ಕು ದಿನಗಳಲ್ಲಿ ನೀಡಬೇಕೆಂದು ಮತ್ತು ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಆದೇಶ ಹೊರಡಿಸಲಾಗುವುದು ಎಂದು ಸಚಿವ ಡಾ ಸುಧಾಕರ್ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


