ರಾಜ್ಯ

ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕ

ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ.

ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕ
ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ
Published On :

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. 

ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಅಪೋಲೋ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆ ತುಂಬಾ ಕೊರೋನಾ ರೋಗಿಗಳು ತುಂಬಿ ಹೋಗಿರುವುದರಿಂದ ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಸಮಸ್ಯೆ ಎದುರಾಗಿದೆ. 

ಸಾಲುಮರದ ತಿಮ್ಮಕ್ಕ ಸಹ ಹಾಸಿಗೆಗಾಗಿ ಎರಡು ಗಂಟೆಗಳ ಕಾಲ ಪರದಾಟ ನಡೆಸಬೇಕಾಯಿತು. ಇನ್ನು ತಿಮ್ಮಕ್ಕ ಅವರಿಗೆ ಬೆಡ್ ಹೊಂದಿಸಲು ವೈದ್ಯರು ಸಹ ಪ್ರಯತ್ನಿ ನಡೆಸಿದ್ದರು. ನಂತರ ಅವರಿಗೆ ಹಾಸಿಗೆ ಹೊಂದಿಸಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.  

ಈ ಹಿಂದೆ ಬಚ್ಚಲುಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದ ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಅದೇ ಜಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.