ಕೊರೋನಾ ಹೆಚ್ಚಳ: ಹಾಸಿಗೆ ಲಭ್ಯತೆ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಡಿಸಿಪಿಗಳ ನೆರವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸಿಗೆ ವ್ಯವಸ್ಥೆಗೆ ಬಿಬಿಎಂಪಿ ಅಧಿಕಾರಿಗಳ ನೆರವಿಗೆ ನಗರ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸಿಗೆ ವ್ಯವಸ್ಥೆಗೆ ಬಿಬಿಎಂಪಿ ಅಧಿಕಾರಿಗಳ ನೆರವಿಗೆ ನಗರ ಪೊಲೀಸರು ಮುಂದಾಗಿದ್ದಾರೆ.
ಹಾಸಿಗೆ ವ್ಯವಸ್ಥೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿನ್ನೆಯಷ್ಟೇ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಸೂಚನೆ ಬೆನ್ನಲ್ಲೇ ಇದೀಗ ಕ್ರಮ ಕೈಗೊಂಡಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇದೀಗ ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆಗೆ ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಪಡೆ ರಚನೆ ಮಾಡಿದ್ದಾರೆ.
ನಗರದ ಬಿಬಿಎಂಪಿ ಎಂಟು ವಲಯಗಳ ವ್ಯಾಪ್ತಿಯ ಸರ್ಕಾರಿ ಕೋಟಾದಡಿ ಕೋವಿಡ್ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಮೇಲೆ ಜಂಟಿ ಕಾರ್ಯಾಪಡೆ ನಿಗಾವಹಿಸಲಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ವಿವರ ಹೀಗಿದೆ...
ಶರಣಪ್ಪ ಎಸ್‌ಡಿ - ಪೂರ್ವ ವಲಯ, ಅನುಚೇತ್ ಎಂಎನ್ - ಪಶ್ಚಿಮ ವಲಯ, ಹರೀಶ್ ಪಾಂಡೆ - ದಕ್ಷಿಣ ವಲಯ, ದೇವರಾಜ ಡಿ - ಮಹಾದವೇಪುರ ವಲಯ, ಬಾಬಾ ಸಿಕೆ - ಯಲಹಂಕ ವಲಯ, ಸಂಜೀವ್ ಎಂ ಪಾಟೀಲ್ - ಆರ್.ಆರ್.ನಗರ ವಲಯ, ಧರ್ಮೇಂದರ್ ಕುಮಾರ್ ಮೀನಾ - ದಾಸರಹಳ್ಳಿ ವಲಯ, ಮತ್ತು ಶ್ರೀನಾಥ್ ಜೋಶಿ ಬೊಮ್ಮನಹಳ್ಳಿ ವಲಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


