ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಸಹಕರಿಸಬೇಕು: ಬಿ.ಸಿ. ಪಾಟೀಲ್
ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಮಾತನಾಡಿದ ಕೃಷಿ ಸಚಿವರು ಹೂವು, ಹಣ್ಣು ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್.ಟಿ.ಓ ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು ಎಂದು ಹೇಳಿದ್ದಾರೆ.
ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಹೀಗೆ ಮಾಡಿರುವುದು ತಪ್ಪು. ಎಲ್ಲಾ ಇಲಾಖೆಗಳು ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರೋನಾ ಸುರಕ್ಷತೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


